HomeIndiaBig Update: ದೇಶಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆ, IMD ಎಚ್ಚರಿಕೆ

Big Update: ದೇಶಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆ, IMD ಎಚ್ಚರಿಕೆ

ಬೇಸಿಗೆಯ ಬಿಸಿಲಿನ ಝಳದಿಂದ ಕಂಗೆಟ್ಟಿರುವ ಜನರಿಗೆ ಸಿಹಿಸುದ್ದಿ ಮತ್ತು ಅಲರ್ಟ್ ಒಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು, ಸಿಡಿಲು, ಜೋರಾದ ಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಐಎಂಡಿ ಮಾರ್ಚ್ 21 ರಿಂದ 24 ರ ತನಕ ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 21 ರಂದು ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಗಂಗಾನದಿಯ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಮಳೆ ಬಂದ ಕಡೆ ಅಪಾರ ನಷ್ಟವಾಗುವುದು ಖಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಕೆಲವು ದಿನ ದೇಶದ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದೇಶದ ಪೂರ್ವ, ಕೇಂದ್ರ ಮತ್ತು ಈಶಾನ್ಯ ಭಾಗಗಳಲ್ಲಿ ಹವಾಮಾನ ಚಟುವಟಿಕೆಗಳು ತೀವ್ರಗೊಂಡಿವೆ ಎಂದು ಐಎಂಡಿ ಹೇಳಿದ್ದು, ಭಾರೀ ಮಳೆ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ಕೊಟ್ಟಿದೆ.

ಈಶಾನ್ಯ ವಲಯದಲ್ಲಿ ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮಾರ್ಚ್ 24ರಂದು ಅಲ್ಲಲ್ಲಿ ಭಾರಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಪೂರ್ವ ಮತ್ತು ಮಧ್ಯ ಭಾರತದಲ್ಲಿ ಮುಂಬರುವ ದಿನಗಳಲ್ಲಿ ಬಲವಾದ ಗಾಳಿಯೊಂದಿಗೆ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.

ವಾಯುವ್ಯ ಭಾರತದಲ್ಲೂ ಮತ್ತೆ ಮಳೆಯ ವಾತಾವರಣ ಕಂಡುಬರಲಿದ್ದು, ಮಾರ್ಚ್ 23ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಾಧಾರಣ ಮಳೆ ಹಾಗೂ ಹಿಮಪಾತದ ಮುನ್ಸೂಚನೆ ನೀಡಲಾಗಿದೆ. ಪೂರ್ವ ಉತ್ತರ ಪ್ರದೇಶದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಐಎಂಡಿ ವಿಜ್ಞಾನಿ ಅಖಿಲ್ ಶ್ರೀವಾಸ್ತವ ಎಎನ್ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿ, “ಪ್ರಸ್ತುತ ಭಾರತದಾದ್ಯಂತ ದೊಡ್ಡ ಮಟ್ಟದ ಗುಡುಗು ಸಹಿತ ಮಳೆಯ ಚಟುವಟಿಕೆಗಳು ಕಂಡುಬರುತ್ತಿವೆ. ದೆಹಲಿಯಲ್ಲಿ ಮಳೆಯಾಗಿದ್ದು, ಇದರಿಂದಾಗಿ ಗರಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ನಮ್ಮ ಮುನ್ಸೂಚನೆಯ ಪ್ರಕಾರ ದೆಹಲಿಯಲ್ಲಿ ಮತ್ತೆ ಇಂತಹ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ, ಭಾನುವಾರದಿಂದ ದೆಹಲಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ” ಎಂದು ಹೇಳಿದ್ದಾರೆ.

ಆರೆಂಜ್ ಅಲರ್ಟ್: ಶನಿವಾರ ಹವಾಮಾನವು ಮೋಡಕವಿದ ವಾತಾವರಣದಿಂದ ಕೂಡಿರಲಿದೆ. ಮಳೆಯಾದ ಮೇಲೆ ಇಂದು ಗರಿಷ್ಠ ತಾಪಮಾನದಲ್ಲಿ ಸುಮಾರು 2-3° ಡಿಗ್ರಿಯಷ್ಟು ಇಳಿಕೆ ಕಂಡುಬರಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಗುಡುಗು ಸಹಿತ ಮಳೆ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಪೂರ್ವ ಭಾರತದಲ್ಲಿ ಗಾಳಿಯ ವೇಗವು ಗಂಟೆಗೆ 60 ರಿಂದ 70 ಕಿ.ಮೀ ತಲುಪುವ ಸಾಧ್ಯತೆಯಿದ್ದು, ಇದು ಅಪಾಯಕಾರಿಯಾಗಬಹುದು. ದಕ್ಷಿಣದ ರಾಜ್ಯಗಳು ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಆದರೆ ಕರಾವಳಿ ಕರ್ನಾಟಕ, ಗೋವಾ ಮತ್ತು ಕೇರಳದಲ್ಲಿ ಉಷ್ಣಾಂಶ ಹಾಗೂ ಆರ್ದ್ರತೆಯಿಂದ ಕೂಡಿದ ಹವಾಮಾನ ಮುಂದುವರಿಯಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular