ನೀತಿ ಸಂಹಿತೆ ಜಾರಿ ಹಿನ್ನೆಲೆ ಸರ್ಕಾರಿ ವಾಹನ ಬಳಕೆ ನಿಯಮ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ವಾಹನಗಳ ಬಳಕೆ ಕುರಿತಂತೆ ಚುನಾವಣಾ ಆಯೋಗ ರೂಪಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ಮಾದರಿ ನೀತಿ ಸಂಹಿತೆತಿ ಜಾರಿಯಾಗಿದ್ದು, ಸರ್ಕಾರಿ ವಾಹನಗಳನ್ನು ಚುನಾವಣಾ ಆಯೋಗ ಸೂಚಿಸಿದ ಅಥವಾ ನಿಗದಿತ ಕೆಲಸಗಳಿಗೆ ಮಾತ್ರ ಬಳಕೆ ಮಾಡಬೇಕು ಎಂದು ಹೇಳಲಾಗಿದೆ. ರಾಜಕಾರಣಿಗಳು ಹಾಗೂ ರಾಜಕೀಯ ಪಕ್ಷಗಳ ಯಾವುದೇ ಕಾರ್ಯಕ್ಕೆ ಸರ್ಕಾರಿ ವಾಹನ ಬಳಸಬಾರದು. ಚುನಾವಣಾ ಪ್ರಚಾರ ಸೇರಿ ರಾಜಕೀಯ ಪಕ್ಷ ಮತ್ತು ವ್ಯಕ್ತಿಗಳ ಪರವಾಗಿ ವಾಹನ ಬಳಕೆ ನಿರ್ಬಂಧಿಸಲಾಗಿದೆ. ಆಯಾ ಜಿಲ್ಲಾಡಳಿತಗಳು ಸರ್ಕಾರಿ ವಾಹನಗಳ ಬಳಕೆ ಬಗ್ಗೆ ನಿಗಾ ವಹಿಸಬೇಕು. ನೀತಿ ಸಂಹಿತೆ ಉಲ್ಲಂಘಿಸಿ ವಾಹನ ಬಳಕೆಯಾದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read