7 ನೇ ವೇತನ ಆಯೋಗ ಜಾರಿ ; ಆ.17 ರಂದು ರಾಜ್ಯ ಸರ್ಕಾರಿ ನೌಕರರ ‘ನಮ್ಮಾಭಿಮಾನದ ಅಭಿನಂದನಾ ಸಮಾರಂಭ’

ಬೆಂಗಳೂರು : ರಾಜ್ಯ ಸರ್ಕಾರ ಏಳನೇ ವೇತನ ಆಯೋಗ ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ.

ಈ ಹಿನ್ನೆಲೆ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಧನ್ಯವಾದ ತಿಳಿಸಲು ‘ನಮ್ಮಾಭಿಮಾನದ ಅಭಿನಂದನಾ ಸಮಾರಂಭ’ ವನ್ನು ಆಗಸ್ಟ್ 17ರ ಶನಿವಾರದಂದು ಏರ್ಪಡಿಸಿದೆ.

ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮೇಕ್ರಿ ಸರ್ಕಲ್ ಬಳಿ ಇರುವ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರಿಗೆ OOD ಸೌಲಭ್ಯ ಇರುತ್ತದೆ.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಸ್ಥಳದಲ್ಲಿಯೇ ಹಾಜರಾತಿ ಪ್ರಮಾಣ ಪತ್ರ ನೀಡಲಿದ್ದು, ರಾಜ್ಯ ಸರ್ಕಾರಿ ನೌಕರರು ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read