HomeKarnatakaಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಪೂರೈಕೆ, ವಿತರಣೆಗೆ ಇ- ಔಷಧ ಸಾಫ್ಟ್ವೇರ್ ಅಳವಡಿಕೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಪೂರೈಕೆ, ವಿತರಣೆಗೆ ಇ- ಔಷಧ ಸಾಫ್ಟ್ವೇರ್ ಅಳವಡಿಕೆ

ಕಲಬುರಗಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಪೂರೈಕೆ ವಿತರಣೆಗಾಗಿ ಇ- ಔಷಧ ಸಾಫ್ಟ್ವೇರ್ ಅಳವಡಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ತೀವ್ರ ಕೊರತೆ ಪತ್ತೆಯಾಗಿದೆ. ರಾಜ್ಯದ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎಷ್ಟು ಔಷದ ಸ್ಟಾಕ್ ಇದೆ, ಯಾವ ಔಷಧ ದಿನಾಂಕ ಮುಗಿದಿದೆ ಎನ್ನುವ ಎಲ್ಲಾ ಮಾಹಿತಿ ಇ- ಔಷಧ ಸಾಫ್ಟ್ವೇರ್ ಮೂಲಕ ನೇರವಾಗಿ ಗೊತ್ತಾಗುತ್ತದೆ. ಅದರಂತೆ ಔಷಧ ಪೂರೈಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಆರೋಗ್ಯ ಕೇಂದ್ರಗಳು ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡದ ಶೇಕಡ 50ರಷ್ಟು ಗುರಿ ಸಾಧಿಸಲು ತಿಳಿಸಲಾಗಿದೆ. ಒಂದು ವೇಳೆ ಮಾರ್ಚ್ ಒಳಗೆ ಗುಣಮಟ್ಟ ಕಾಯ್ದುಕೊಳ್ಳಲು ವಿಫಲವಾದಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಇನ್ಸೆಂಟಿವ್ ಕಡಿತ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular