HomeKarnatakaಗಮನಿಸಿ : ರಾಜ್ಯಾದ್ಯಂತ 'ಇ-ಆಸ್ತಿ ವ್ಯವಸ್ಥೆ' ಜಾರಿ : ಇನ್ಮುಂದೆ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ...

ಗಮನಿಸಿ : ರಾಜ್ಯಾದ್ಯಂತ ‘ಇ-ಆಸ್ತಿ ವ್ಯವಸ್ಥೆ’ ಜಾರಿ : ಇನ್ಮುಂದೆ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.

ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಅ.07 ರಿಂದ  ನಗರ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular