24 ಗ್ರಾಮಗಳ ರೈತರ ಜಮೀನಿಗೆ ನೀರುಣಿಸುವ ಉದ್ದೇಶದಿಂದ ‘ತಿಮ್ಮಾಪುರ ಏತ ನೀರಾವರಿ ಯೋಜನೆ’ ಜಾರಿ : ಡಿಸಿಎಂ ಡಿಕೆಶಿ

ರಾಯಚೂರು : 24 ಗ್ರಾಮಗಳ ರೈತರ ಜಮೀನಿಗೆ ನೀರುಣಿಸುವ ಉದ್ದೇಶದಿಂದ ತಿಮ್ಮಾಪುರ ಏತ ನೀರಾವರಿ ಯೋಜನೆ ಜಾರಿಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಇಂದು ನಡೆದ ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ, ಜಲ ಜೀವನ್ ಮಿಷನ್ ಯೋಜನೆಯ ಶಂಕುಸ್ಥಾಪನೆ, ಸರ್ಕಾರಿ ಪದವಿ ಕಾಲೇಜಿನ ಸುವರ್ಣ ಮಹೋತ್ಸವ, ಕರ್ನಾಟಕ ಸಂಭ್ರಮ 50ರ ಕನ್ನಡ ರಥ ಮೆರವಣಿಗೆ ಹಾಗೂ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿ ಮಾತನಾಡಿದರು.

ಕಲ್ಯಾಣ ಕರ್ನಾಟಕದ ಭಾಗವಾದ ಸಿಂಧನೂರಿನಲ್ಲಿ ಇಂದು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಗೊಳಿಸಿದ್ದು, 24 ಗ್ರಾಮಗಳ ರೈತರ ಜಮೀನಿಗೆ ನೀರುಣಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ . ಜಿಲ್ಲೆಯ ಸಿಂಧನೂರು ತಾಲೂಕಿನ ಒಳಬಳ್ಳಾರಿ ಬಳಿ ತುಂಗಭದ್ರಾ ನದಿ ಮೂಲಕ ತಿಮ್ಮಾಪುರ ಏತ ನೀರಾವರಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ. ಈ ಮೂಲಕ ಈ ಭಾಗದ ನೀರಿನ ಸಮಸ್ಯೆ ನೀಗಲಿದೆ.ಇದಲ್ಲದೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಾಗಿದೆ. ನುಡಿದಂತೆ ನಡೆದ ನಮ್ಮ ಸರ್ಕಾರ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಬದ್ಧ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read