Yuva Nidhi Scheme : ಡಿಸೆಂಬರ್ ಅಥವಾ ಜನವರಿಯಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆ ಇಂದು ಅಧಿಕೃತವಾಗಿ ಜಾರಿಯಾಗಿದ್ದು, ಇದೀಗ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ, ಅಂತೆಯೇ ಡಿಸೆಂಬರ್ ಅಥವಾ ಜನವರಿಯಲ್ಲಿ ಯುವನಿಧಿ ಜಾರಿಯಾಗಲಿದೆ ಎಂದು ಘೋಷಣೆ ಮಾಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿಯಾಗಲ್ಲ, ಇದರಿಂದ ಬಡ ಜನರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರದ 4 ನೇ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು 2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read