ಕಾಡಾನೆ ದಾಳಿಗೆ 6 ಜನ ಬಲಿ ಹಿನ್ನೆಲೆ ಹಾಸನ ಜಿಲ್ಲಾಡಳಿತದಿಂದ ಮಹತ್ವದ ಕ್ರಮ: ಕೆಲಸದ ಸಮಯ ನಿಗದಿ ಮಾಡಿ ಮಾರ್ಗಸೂಚಿ

 ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ ಐದು ತಿಂಗಳಲ್ಲಿ ಕಾಡಾನೆ ದಾಳಿಗೆ ಆರು ಜನ ಬಲಿಯಾಗಿದ್ದಾರೆ. ಕಾಡಾನೆ -ಮಾನವ ಸಂಘರ್ಷ ತಡೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಅಮಾಯಕ ಕಾರ್ಮಿಕರ ಬಲಿ ತಡೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಾರ್ಮಿಕರ ಕೆಲಸದ ಸಮಯ ನಿಗದಿಗೊಳಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಲ್ಕು ತಿಂಗಳಲ್ಲಿ ಬೇಲೂರು ತಾಲೂಕಿನಲ್ಲಿ ನಾಲ್ವರು ಕಾರ್ಮಿಕರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು ಮತ್ತು ಓರ್ವಪುರುಷ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ

ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ ಮತ್ತು ಕಸಬಾ ಹೋಬಳಿ ಸೇರಿದಂತೆ ಕಾಡಾನೆ ಸಂಚರಿಸುವ ಪ್ರದೇಶಗಳಲ್ಲಿ ಕಾರ್ಮಿಕರ ಕೆಲಸದ ಸಮಯ ನಿಗದಿ ಮಾಡಲಾಗಿದೆ. ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಬೇಕು.

ಕೂಲಿ ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಸಮಯ ನಿಗದಿ ಮಾಡಲಾಗಿದ್ದು, ಬೆಳಗ್ಗೆ 9 ಗಂಟೆಯ ಒಳಗೆ ಮತ್ತು ಸಂಜೆ 5 ಗಂಟೆಯ ನಂತರ ಕಾಫಿ ತೋಟದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡಲು ನಿರ್ಬಂಧ ಹೇರಲಾಗಿದೆ. ಮುಂಜಾನೆ ಮತ್ತು ಸಂಜೆ 5ರ ನಂತರವೇ ಹೆಚ್ಚು ಸಾವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read