ನವದೆಹಲಿ: ಪಾಕಿಸ್ತಾನ ನೆಲೆಯಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ವಿಚಾರ ಮತ್ತು ದೇಶ ರಕ್ಷಣೆ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತಾಗಿ ರಾಜಕೀಯ ನಾಯಕರಿಗೆ ಮಾಹಿತಿ ನೀಡಲು ಗುರುವಾರ ಸರ್ವ ಪಕ್ಷ ಸಭೆ ಕರೆಯಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸರ್ವ ಪಕ್ಷ ಸಭೆಯ ನೇತೃತ್ವ ವಹಿಸಲಿದ್ದಾರೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರಿಗೆ ಸರ್ವ ಪಕ್ಷ ಸಭೆಗೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ,
ಗುರುವಾರ ಬೆಳಗ್ಗೆ 11 ಗಂಟೆಗೆ ಸಂಸತ್ ಭವನದಲ್ಲಿ ನಡೆಯಲಿರುವ ಸರ್ವ ಪಕ್ಷ ಸಭೆಯಲ್ಲಿ ಸೇನಾ ಕಾರ್ಯಚರಣೆಯ ಕುರಿತು ಪ್ರತಿಪಕ್ಷಗಳಿಗೆ ಸರ್ಕಾರ ಮಾಹಿತಿ ನೀಡಲಿದೆ. ರಾಷ್ಟ್ರೀಯ ಭದ್ರತೆ ವಿಚಾರವಾಗಿ ಅನುಸರಿಸಬೇಕಾಗಿರುವ ತಂತ್ರಗಾರಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಈ ನಡುವೆ ಪಾಕಿಸ್ತಾನದ ನೆಲದಲ್ಲಿದ್ದ ಉಗ್ರ ತಾಣಗಳ ಮೇಲೆ ನಡೆದ ರಕ್ಷಣಾ ಪಡೆಗಳು ಆಪರೇಷನ್ ಸಿಂದೂರ ಕಾರ್ಯಾಚರಣೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡಿದ್ದಾರೆ.