ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಬಳ್ಳಾರಿಯ ಸಮೂಹ ಆಸ್ಪತ್ರೆಗಳಲ್ಲಿ ವಿವಿಧ ಹುದ್ದೆಗಳನ್ನು ಕೊಡಿಸುವುದಾಗಿ ಆಕಾಂಕ್ಷಿಗಳಿಂದ ಹಣ ಪಡೆದು ಮೋಸಗೊಳಿಸುತ್ತಿರುವುದು ಕಂಡುಬಂದಿದ್ದು, ಸಾರ್ವಜನಿಕರು ಯಾವುದೇ ಆಸೆ, ಆಮಿಷಗಳಿಗೆ ಕಿವಿಗೊಡದೇ ಜಾಗರಾಕರಾಗಿರಬೇಕು ಎಂದು ಬಿಎಂಸಿಆರ್ಸಿ ಯ ನಿರ್ದೇಶಕರು ತಿಳಿಸಿದ್ದಾರೆ.
ಒಂದು ವೇಳೆ ಅಂತಹ ಯಾವುದೇ ಪ್ರಸಂಗಗಳು ಕಂಡುಬಂದಲ್ಲಿ ಬಿಎಂಸಿಆರ್ಸಿ ಕಚೇರಿ ಗಮನಕ್ಕೆ ತರಬೇಕು ಹಾಗೂ ಸರ್ಕಾರದಿಂದ ಹುದ್ದೆಗಳು ಮಂಜೂರಾದಲ್ಲಿ ನಿಯಮಾನುಸಾರ ಸಾರ್ವಜನಿಕರ ಗಮನಕ್ಕೆ ತಂದು, ಪ್ರಕಟಣೆ ಹೊರಡಿಸಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ಅವರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:BMRCL