ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.ಗಣರಾಜ್ಯೋತ್ಸವದ ಪ್ರಯುಕ್ತ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಆದ್ದರಿಂದ ಭದ್ರತಾ ಕ್ರಮ ಕೈಗೊಳ್ಳಲು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆ ಏರ್ ಪೋರ್ಟ್ ಅಡಳಿತ ಮಂಡಳಿ ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.
ಪ್ರಯಾಣಿಕರು ಭದ್ರತಾ ತಪಾಸಣೆಗೆ ಸಾಕಷ್ಟು ಸಮಯವನ್ನು ನೀಡಬೇಕಾಗಿದ್ದು, ಆದ್ದರಿಂದ ವಿಮಾನ ನಿಲ್ದಾಣಕ್ಕೆ ಆದಷ್ಟು ಬೇಗ ಬನ್ನಿ. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ನಿಮ್ಮ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದೆ.
ಗಣರಾಜ್ಯೋತ್ಸವದ ಹಿನ್ನೆಲೆ ವಾರಾಂತ್ಯದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿದೆ. ಇದಲ್ಲದೆ, ಗಣರಾಜ್ಯೋತ್ಸವಕ್ಕಾಗಿ ಭದ್ರತಾ ಕ್ರಮಗಳ ಕಾರಣ, ಎಲ್ಲಾ ಪ್ರಯಾಣಿಕರು ಚೆಕ್-ಇನ್ ಮತ್ತು ಭದ್ರತಾ ಕಾರ್ಯವಿಧಾನಗಳಿಗೆ ಸಾಕಷ್ಟು ಸಮಯವನ್ನು ನೀಡಲು BLR ವಿಮಾನ ನಿಲ್ದಾಣಕ್ಕೆ ತಮ್ಮ ಪ್ರಯಾಣವನ್ನು ಯೋಜಿಸಲು ಸೂಚಿಸಲಾಗಿದೆ. ವಿಮಾನ ಸಂಬಂಧಿತ ಮಾಹಿತಿಗಾಗಿ, ದಯವಿಟ್ಟು ನಿಮ್ಮ ಸಂಬಂಧಿತ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಿ. ನಿಮ್ಮ ತಿಳುವಳಿಕೆ ಮತ್ತು ಸಹಕಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

