ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲಾಗುವುದು. ಪ್ರಸ್ತುತ ಇರುವ ಜನ ಔಷಧಿ ಕೇಂದ್ರಗಳ ಒಪ್ಪಂದ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ. ಪರಿಶೀಲನೆ ಹಂತದಲ್ಲಿರುವ 31 ಜನೌಷಧಿ ಕೇಂದ್ರಕ್ಕೆ ಅನುಮತಿ ಬೇಡವೆಂದು ಹೇಳಲಾಗಿದೆ. ಹೊಸದಾಗಿ 31 ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಜನೌಷಧ ಕೇಂದ್ರಗಳು ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾಗಿವೆ. ಜನೌಷಧ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಔಷಧಿ ಕೇಂದ್ರ ಸ್ಥಾಪಿಸಿದರೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿರುತ್ತದೆ ಎಂದು
ಅಭಿಪ್ರಾಯ ವ್ಯಕ್ತಪಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ.