HomeLatest NewsBIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ’ಜನೌಷಧಿ ಕೇಂದ್ರ’ ಬಂದ್ ಮಾಡಲು...

BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ’ಜನೌಷಧಿ ಕೇಂದ್ರ’ ಬಂದ್ ಮಾಡಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲಾಗುವುದು. ಪ್ರಸ್ತುತ ಇರುವ ಜನ ಔಷಧಿ ಕೇಂದ್ರಗಳ ಒಪ್ಪಂದ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ. ಪರಿಶೀಲನೆ ಹಂತದಲ್ಲಿರುವ 31 ಜನೌಷಧಿ ಕೇಂದ್ರಕ್ಕೆ ಅನುಮತಿ ಬೇಡವೆಂದು ಹೇಳಲಾಗಿದೆ. ಹೊಸದಾಗಿ 31 ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಜನೌಷಧ ಕೇಂದ್ರಗಳು ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾಗಿವೆ. ಜನೌಷಧ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಔಷಧಿ ಕೇಂದ್ರ ಸ್ಥಾಪಿಸಿದರೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿರುತ್ತದೆ ಎಂದು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿಪ್ರಾಯ ವ್ಯಕ್ತಪಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular