ರೋಗಿಗಳಿಗೆ ಉಚಿತ ಸಿಟಿ ಸ್ಕ್ಯಾನ್, MRI ಸೇವೆ ಸೇರಿ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ.

ಬೆಂಗಳೂರು ನಗರದ ನೈರ್ಮಲ್ಯದ ದೃಷ್ಟಿಯಿಂದ ತ್ಯಾಜ್ಯ ಸಂಗ್ರಹಣೆ, ಕಸ ಗುಡಿಸುವಿಕೆ ಹಾಗೂ ಸಾಗಾಟದ ಸಮರ್ಪಕ ನಿರ್ವಹಣೆಗಾಗಿ ತ್ಯಾಜ್ಯ ನಿರ್ವಹಣೆ ಪ್ರಕ್ರಿಯೆಗೆ ಮರುಟೆಂಡ‌ರ್ ಕರೆಯಲು ನಿರ್ಧಾರ.

ಕೋಲಾರ ಜಿಲ್ಲೆಯ ಮಾಲೂರು, ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ರಾಜಪರಮೇಶ್ವರಿ ನಾಲೆ ಮತ್ತು ಹಾರೋಹಳ್ಳಿ ಮೇಲ್ದಂಡೆ ನಾಲೆಗಳ ಆಧುನೀಕರಣ ಕಾಮಗಾರಿಯನ್ನು ರೂ. 45 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿರಿಜಾ ಅಣೆಕಟ್ಟು ನಾಲೆಯ ಹಾರೋಹಳ್ಳಿ ಪಿಕಪ್ ನಾಲೆ ಹಾಗೂ ರಾಜಪರಮೇಶ್ವರಿ ಅಣೆಕಟ್ಟು ನಾಲೆಯ ಬಂಡಿಬಚ್ಚಲು ಶಾಖಾ ನಾಲೆಯ ಆಧುನೀಕರಣ ಕಾಮಗಾರಿಯನ್ನು ರೂ.45 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪಟ್ಟಣದ ಬಳಿ ಕಾವೇರಿ ನದಿಯಿಂದ ನೀರೆತ್ತಿ ಹಾರೋಹಳ್ಳಿ ಮೇಲ್ಮಟ್ಟದ ನಾಲೆ ಹಾಗೂ ಕೆಳಮಟ್ಟದ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಕಾಮಗಾರಿಯನ್ನು ರೂ.49.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.

ಮೈಸೂರು ಜಿಲ್ಲೆಯ ಚಿಕ್ಕಂಕನಹಳ್ಳಿ ಕೆರೆಯ ಮೇಲ್ಗಾಲುವೆ ಹಾಗೂ ಕಿಗ್ಗಾಲುವೆಗಳ ಆಧುನೀಕರಣ ಕಾಮಗಾರಿಯನ್ನು ರೂ. 34.65 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಕನಕಪುರ ಪಟ್ಟಣದ ಮನಗಾಳು ಸೇತುವೆಯ ಸಮೀಪದ 2 ಕಿ.ಮೀ ಪ್ರದೇಶವನ್ನು ರೂ. 120 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ರೂ. 89.30 ಕೋಟಿ ಅಂದಾಜು ಮೊತ್ತದಲ್ಲಿ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ರೂ. 40 ಕೋಟಿ ಅಂದಾಜು ಮೊತ್ತದಲ್ಲಿ ರಾಯಚೂರು ನಗರದಲ್ಲಿ ಸುಸಜ್ಜಿತವಾದ ಜಿಲ್ಲಾ ಸಮುದಾಯ ಕೇಂದ್ರ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.

ರೋಗಿಗಳಿಗೆ ಉಚಿತ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಮೈಸೂರು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ ರೂ. 30 ಕೋಟಿ ವೆಚ್ಚದಲ್ಲಿ 2 ಎಂಆರ್‌ಐ ಸ್ಕ್ಯಾನಿಂಗ್ ಮಷಿನ್ ಅನ್ನು ಅಳವಡಿಸಲು ತೀರ್ಮಾನ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 200 ಹಾಸಿಗೆಗಳ ಸಾಮರ್ಥ್ಯದ ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ.

ಬೆಂಗಳೂರು ನಗರದ ಕೆಂಗೇರಿ ಬಂಡೇಮಠ ಬಡಮಠ ಬಡಾವಣೆಯ 3 ಎಕರೆ ಪ್ರದೇಶದಲ್ಲಿ ಕ್ಲಬ್ ಹೌಸ್, ಈಜುಕೊಳ, ಜಿಮ್, ಗ್ರಂಥಾಲಯ, ಒಳಾಂಗಣ ಕ್ರೀಡಾಂಗಣಗಳನ್ನು ಒಳಗೊಂಡ ವಸತಿ ಸಮುಚ್ಚಯ ನಿರ್ಮಾಣವನ್ನು ರೂ. 180 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಹೆಚ್.ಎನ್ ವ್ಯಾಲಿ ಯೋಜನೆಯಡಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ರೂ. 140 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಬಳಿ ಜಯಮಂಗಲಿ ನದಿಗೆ ಅಡ್ಡಲಾಗಿ ರೂ.18.50 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.

ಬೆಂಗಳೂರು ಮೆಟ್ರೋ ಯೋಜನೆ ಹಂತ-2ರಲ್ಲಿ ಭೂಸ್ವಾಧೀನ ವೆಚ್ಚ, ಸಿವಿಲ್ ಕಾಮಗಾರಿಗಳ ವೆಚ್ಚ ಹಾಗೂ ಮೆಟ್ರೋ ಮಾರ್ಗದ ಉದ್ದದಲ್ಲಿ ಏರಿಕೆ ಆಗಿರುವುದರಿಂದ ಅನುಮೋದಿತ ಅಂದಾಜು ವೆಚ್ಚವನ್ನು ರೂ.26,405 ಕೋಟಿಗಳಿಂದ ರೂ.40,42ಕೋಟಿಗಳಿಗೆ ಹೆಚ್ಚಿಸಿ, ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಿ, ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read