HomeKarnatakaಪರಿಶಿಷ್ಟ ಜಾತಿ, ಪಂಗಡ ಮೀಸಲಾತಿ ಹೆಚ್ಚಳ ಪರಿಣಾಮಕಾರಿ ಜಾರಿ ಬಗ್ಗೆ ಮಹತ್ವದ ಚರ್ಚೆ

ಪರಿಶಿಷ್ಟ ಜಾತಿ, ಪಂಗಡ ಮೀಸಲಾತಿ ಹೆಚ್ಚಳ ಪರಿಣಾಮಕಾರಿ ಜಾರಿ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಇಂದು ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಸಮುದಾಯದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಹೆಚ್ಚಿಸಲಾದ ಶೇ.17 ಹಾಗೂ ಶೇ.7ರ ಮೀಸಲಾತಿಯನ್ನು ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಮುಂದಿನ ರೂಪುರೇಷೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.

ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ನ್ಯಾಯಾಲಯದಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೆಚ್ಚಿಸಲಾದ ಮೀಸಲಾತಿಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿ ಹಾಗೂ ಶ್ರೀಗಳ ಮಾರ್ಗದರ್ಶನಕ್ಕೆ ಸ್ಪಂದಿಸಿ, ರಾಜ್ಯ ಸರ್ಕಾರವು ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಿರುವುದು ಸ್ವಾಗತಾರ್ಹ ಮತ್ತು ಸಮುದಾಯದ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಾಮಾಜಿಕ ನ್ಯಾಯ, ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಪರಿಶಿಷ್ಟ ಸಮುದಾಯಗಳ ಸಬಲೀಕರಣಕ್ಕಾಗಿ ನಮ್ಮ ಬದ್ಧತೆ ಮತ್ತು ಹೋರಾಟ ನಿರಂತರವಾಗಿರಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ, ಎಜಿ ಶಶಿಕುಮಾರ್ ಶೆಟ್ಟಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular