HomeLatest Newsವಯೋ ನಿವೃತ್ತಿ, ಸ್ವ ಇಚ್ಛಾ ನಿವೃತ್ತಿ ನೌಕರರಿಗೆ ಪಿಂಚಣಿ ಬಗ್ಗೆ ಮುಖ್ಯ ಮಾಹಿತಿ

ವಯೋ ನಿವೃತ್ತಿ, ಸ್ವ ಇಚ್ಛಾ ನಿವೃತ್ತಿ ನೌಕರರಿಗೆ ಪಿಂಚಣಿ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಪ್ರಸ್ತಾವನೆಯನ್ನು ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರ ಕಛೇರಿಗೆ ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ವಯೋ ನಿವೃತ್ತಿ / ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ONLINE (K2) ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಹಾಗೂ ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರ ಕಛೇರಿಗೆ ನಿಯಮಾನುಸಾರ ಸಲ್ಲಿಸಲು ಉಲ್ಲೇಖಿತ ಪತ್ರದಲ್ಲಿ ಆದೇಶಿಸಲಾಗಿರುತ್ತದೆ.

ಮೇಲಿನ ಆದೇಶದನ್ವಯ ಖಜಾನೆ – 2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸುವ ಕುರಿತು ದಿನಾಂಕ: 12-02-2026ರ ಮಧ್ಯಾಹ್ನ 3.15ಕ್ಕೆ VIDEO CONFERENCE ಮೂಲಕ ತರಬೇತಿಯನ್ನು ಆಯೋಜಿಸಲಾಗಿದ್ದು, ಸದರಿ ತರಬೇತಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿಯ ಸಿಬ್ಬಂದಿಗಳು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಸದರಿ ತರಬೇತಿಗೆ ಹಾಜರಾಗುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular