ಗ್ರಾಮೀಣ ಪ್ರದೇಶದ ನಿರುದ್ಯೋಗಿ ವೃತ್ತಿನಿರತ ಕುಶಲಕರ್ಮಿಗಳಿಗೆ 2025-26 ನೇ ಸಾಲಿನಲ್ಲಿ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಮರಗೆಲಸ, ಗಾರೆಕೆಲಸ, ಕ್ಷೌರಿಕ, ದೋಬಿ, ಎಲೆಕ್ಟಿçಕಲ್ ರಿಪೇರಿ, ಬೋರ್ಬೇಲ್ ರಿಪೇರಿ/ಮೋಟರ್ ವೈಂಡಿAಗ್ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪನಿರ್ದೇಶಕರು(ಗ್ರಾ.ಕೈ) ಜಿಲ್ಲಾ ಪಂಚಾಯತ್, ಕೈಗಾರಿಕಾ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡ, ಡೈರಿ ಸರ್ಕಲ್, ಹಾಸನ. ರವರ ಕಚೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಆನ್ಲೈನ್ ಮೂಲಕ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು ಸೆ.12 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ ಲಾಟರಿ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತ್, ಕೈಗಾರಿಕಾ ವಿಭಾಗದ ಉಪನಿರ್ದೇಶಕರು(ಗ್ರಾ.ಕೈ) ತಿಳಿಸಿದ್ದಾರೆ.
You Might Also Like
TAGGED:ಕುಶಲಕರ್ಮಿ