HomeKarnatakaಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 22 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://.shp.karnataka.gov.in
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ರೂ.1.00 ಲಕ್ಷ. ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://.bcwd.karnataka.gov.in ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular