HomeIndiaಜೇನುಕುರುಬ ಸಮುದಾಯಕ್ಕೆ ಮುಖ್ಯ ಮಾಹಿತಿ : ಆಧಾರ್ ಕಾರ್ಡ್ ನೋಂದಣಿ ಆರಂಭ

ಜೇನುಕುರುಬ ಸಮುದಾಯಕ್ಕೆ ಮುಖ್ಯ ಮಾಹಿತಿ : ಆಧಾರ್ ಕಾರ್ಡ್ ನೋಂದಣಿ ಆರಂಭ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪ್ರಧಾನಮಂತ್ರಿ ಜನಜಾತಿಯ ಆದಿವಾಸಿ ನ್ಯಾಯ ಮಹಾ ಯೋಜನೆಯಡಿ(ಪಿಎಂ-ಜನ್ಮನ್) ಕಾರ್ಯಕ್ರಮಗಳನ್ನು ಪಿವಿಟಿಜಿ ಸಮುದಾಯವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯಲು ದೇಶದಾದ್ಯಂತ ಪಿಎಂ-ಜನ್ಮನ್ ಪೇಸ್ 2 (PMJANMAN Phase-II) ಕಾರ್ಯಕ್ರಮದಡಿ ಅರಿವು ಮೂಡಿಸುವ ಶಿಬಿರ/ಫಲಾನುಭವಿಗಳ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್, 10 ರವರೆಗೆ ವಿಸ್ತರಿಸಲಾಗಿದೆ.

ಕೊಡಗು ಜಿಲ್ಲೆಯ ಬುಡಕಟ್ಟು ಸಮುದಾಯವಾದ ಜೇನುಕುರುಬ ಸಮುದಾಯದವರಿಗೆ ಪಿಎಂ-ಜನ್ಮನ್ ಪೇಸ್ 2 (PM-JANMAN phase II) ರಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು/ ಬ್ಲಾಕ್ ನೋಡೆಲ್ ಅಧಿಕಾರಿಗಳ ತಂಡ ರಚಿಸಲಾಗಿದೆ.

ಆಗಸ್ಟ್, 23 ರಿಂದ ಸೆಪ್ಟೆಂಬರ್, 10 ರ ಅವಧಿಯಲ್ಲಿ ಜೇನುಕುರುಬ ಜನಾಂಗದವರಿಗೆ ಆಧಾರ್ ಕಾರ್ಡ್ ನೋಂದಣಿ, ಪಿ.ಎಂ ಜನ್ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಕಾರ್ಡ್, ಸಿಕೆಲ್ಸೆಲ್ ಅನೆಮಿಯಾ ಖಾಯಿಲೆ ಸ್ಕ್ರೀನಿಂಗ್ ಪರೀಕ್ಷೆ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜೇನುಕುರುಬ ಜನಾಂಗದವರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ ಇವರ ಕಚೇರಿ ದೂರವಾಣಿ ಸಂಖ್ಯೆ 08272-200500, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ವಿರಾಜಪೇಟೆ ತಾಲ್ಲೂಕು (9901482763) ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು (7259552655) ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular