ಮಡಿಕೇರಿ: ಯುವನಿಧಿ ಯೋಜನೆಗೆ ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪ್ರತಿ ತ್ರೈಮಾಸಿಕದ ಬದಲಾಗಿ ಮಾಸಿಕವಾಗಿ ನವೆಂಬರ್ 2025 ರ ತಿಂಗಳಿಂದ ಪತ್ರಿ ತಿಂಗಳಿನ 1 ರಿಂದ 25 ರೊಳಗೆ ಸ್ವಯಂ ಘೋಷಣೆಯನ್ನು ಸೇವಾ ಸಿಂಧು ಜಾಲತಾಣ https://sevasindhuservices.karnataka.gov.in ಗೆ ಸಲ್ಲಿಸುವುದು ಕಡ್ಡಾಯವೆಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
