HomeKarnatakaಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: PGCET ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವವರು, ತಮ್ಮ ಅರ್ಜಿಯಲ್ಲಿನ‌ ಮಾಹಿತಿ ತಿದ್ದುಪಡಿ ಮಾಡಬೇಕೆನ್ನುವವರು ಜುಲೈ 3ರಿಂದ 6ರವರೆಗೆ ಮಾಡಿಕೊಳ್ಳಬಹುದು.

ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಮಾರ್ಪಾಡು ಮಾಡುವ ಮುನ್ನ ಅರ್ಜಿಯಲ್ಲಿ ಮುದ್ರಿತವಾಗಿರುವ ಮಾಹಿತಿಯನ್ನು ಗಮನವಿಟ್ಟು ಪರಿಶೀಲಿಸಿ ನಂತರ ತಿದ್ದುಪಡಿ ಮಾಡಬೇಕು ಹಾಗೂ ಮೀಸಲಾತಿ ವಿವರಗಳನ್ನು ತಪ್ಪದೆ ಪರಿಶೀಲಿಸಬೇಕು.

*ಎಂಇ/ಎಂ.ಟೆಕ್ : ಜು.10ರಂದು ದಾಖಲೆ ಪರಿಶೀಲನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸಕ್ತ ಸಾಲಿನಲಿ ಎಂ.ಇ./ಎಂ.ಟೆಕ್. ಆಯ್ದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 10ರ ಬೆಳಿಗ್ಗೆ 10.30ರಿಂದ ಸಂಜೆ 4ರೊಳಗೆ ಮೂಲ ದಾಖಲೆಗಳ ಪರಿಶೀಲನೆಗೆ ಖುದ್ದು #KEA ಕಚೇರಿಗೆ ಬರಲು ಸೂಚಿಸಲಾಗಿದೆ.

ಜೈವಿಕ ತಂತ್ರಜ್ಞಾನ, ಕೆಮಿಕಲ್ ಎಂಜಿನಿಯರಿಂಗ್, ಎನ್ವಿರಾನ್ ಮೆಂಟಲ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್, ಜವಳಿ ತಂತ್ರಜ್ಞಾನ, ಆರ್ಕಿಟೆಕ್ಚರ್ ಕೋರ್ಸುಗಳಿಗೆ ಇದು ಅನ್ವಯವಾಗುತ್ತದೆ.

ಪದವಿ ಪರೀಕ್ಷೆಯ ಎಲ್ಲ ಸೆಮಿಸ್ಟರ್/ವರ್ಷಗಳ ಅಂಕಪಟ್ಟಿಗಳು, ಕೆಇಎ ಆನ್ ಲೈನ್ ಅರ್ಜಿಯ ಪ್ರತಿ, ಗುರುತು ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ತರಬೇಕು. ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ಪದವಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ನಿಯಮಾನುಸಾರ ರಾಂಕಿಂಗ್ ನೀಡಲಾಗುವುದು.

ಎಂ.ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಜಿ ಸಲ್ಲಿಸಿರುವವರು ಈ ಮೇಲಿನ ಪ್ರಮಾಣ ಪತ್ರಗಳ ಜೊತೆಗೆ ಪಿಜಿಇಟಿಎ-26ರಲ್ಲಿ ಪಡೆದಿರುವ ಅಂಕಪಟ್ಟಿಯನ್ನು ಸಹ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular