ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 10, 12ನೇ ತರಗತಿ ಪರೀಕ್ಷೆಗೆ ಶೇ. 75 ಹಾಜರಾತಿ ಕಡ್ಡಾಯ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 2025- 26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಶೇಕಡ 75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿದೆ. ಈ ನಿಯಮವನ್ನು ತಪ್ಪದೇ ಪಾಲಿಸುವಂತೆ, ಹಾಜರಾತಿ ದಾಖಲೆಗಳನ್ನು ಸರಿಯಾಗಿ ನಿರ್ವಹಿಸುವಂತೆ ಶಾಲೆಗಳಿಗೆ ಸೂಚಿಸಲಾಗಿದೆ.

ಪರೀಕ್ಷಾ ನಿಯಮಗಳ ಪ್ರಕಾರ ಬೋರ್ಡ್ ಪರೀಕ್ಷೆಗಳಿಗೆ ಅರ್ಹತೆ ಪಡೆಯಲು ವಿದ್ಯಾರ್ಥಿಗಳು ಕನಿಷ್ಠ ಶೇ. 75ರಷ್ಟು ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ. ವೈದ್ಯಕೀಯ ಕಾರಣ, ಕುಟುಂಬದಲ್ಲಿ ನಿಧನ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸುವ ವಿದ್ಯಾರ್ಥಿಗಳಿಗೆ ಮಾತ್ರ ಶೇಕಡ 25ರಷ್ಟು ವಿನಾಯಿತಿ ಇರಲಿದೆ. ಹಾಜರಾತಿ ದಾಖಲಾತಿಗಳಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಯಾವುದೇ ವಿದ್ಯಾರ್ಥಿ ವೈದ್ಯಕೀಯ ಕಾರಣ ಇತರೆ ಕಾರಣಗಳಿಗೆ ರಜೆ ಪಡೆಯುವುದಿದ್ದಲ್ಲಿ ಅಗತ್ಯ ದಾಖಲೆಗಳನ್ನು ಶಾಲೆಗೆ ಸಲ್ಲಿಸಿ ರಜೆ ಪಡೆದುಕೊಳ್ಳಬೇಕು. ಲಿಖಿತ ವಿನಂತಿ ಇಲ್ಲದ ರಜೆಗಳನ್ನು ಶಾಲೆಗೆ ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುವುದು.

 ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸುವ ಬಗ್ಗೆ ಪೋಷಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಕೊರತೆ ಬಗ್ಗೆ ಪೋಷಕರಿಗೆ ನೋಂದಾಯಿತ ಇ- ಮೇಲ್ ಅಥವಾ ಅಂಚೆಯ ಮೂಲಕ ಲಿಖಿತವಾಗಿ ತಿಳಿಸುವಂತೆ ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read