ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಈಗಾಗಲೇ ಮುಕ್ತಾಯವಾಗಿದ್ದು, ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ಅಭ್ಯರ್ಥಿಗಳ ವಿವರಗಳಿಗೆ ಸಂಬಂಧಿಸಿದ ಯಾವುದಾದರೂ ಸಣ್ಣ ಪುಟ್ಟ ಲೋp ದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಮೇ 3ರವರೆಗೆ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳ ಮನವಿ ಹಿನ್ನೆಲೆಯಲ್ಲಿ ಮೇ 3ರವರೆಗೆ ಲೋಪ ದೋಷ ಸರಿಪಡಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ನಮೂದಿಸಿರುವ ಮಾಹಿತಿಗಳಲ್ಲಿ ತಪ್ಪಿದ್ದರೆ ಸರಿಪಡಿಸಿಕೊಳ್ಳುವ ಜೊತೆಗೆ ವ್ಯಾಸಂಗದ ವಿವರ, ಮೀಸಲಾತಿ ಇತರೆ ಕ್ಲೇಮ್ ದಾಖಲಿಸಿಕೊಳ್ಳಬೇಕಿದ್ದರೂ ಅದಕ್ಕೆ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳಿಗೆ ಅರ್ಜಿಗಳಲ್ಲಿನ ಲೋಪ ಸರಿಪಡಿಸಲು ಇದೇ ಕೊನೆಯ ಅವಕಾಶವಾಗಿದ್ದು, ಮತ್ತೊಮ್ಮೆ ಎಡಿಟಿಂಗ್ ಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಚ್. ಪ್ರಸನ್ನ ತಿಳಿಸಿದ್ದಾರೆ.

