HomeLatest Newsಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇದೇ ವಾರ ಕರಡು ಸೀಟ್ ಮ್ಯಾಟ್ರಿಕ್ಸ್ ಪ್ರಕಟ, ಜೂ. 25ರಿಂದ...

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇದೇ ವಾರ ಕರಡು ಸೀಟ್ ಮ್ಯಾಟ್ರಿಕ್ಸ್ ಪ್ರಕಟ, ಜೂ. 25ರಿಂದ ಮೊದಲನೇ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು: ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್(AICTE) ಅಧಿಕಾರಿಗಳ ತಂಡ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

ಇದೇ ವಾರ ಸಿಇಟಿ, ಮೆಡಿಕಲ್ ಕರಡು ಸೀಟ್ ಮ್ಯಾಟ್ರಿಕ್ಸ್ ಪ್ರಕಟವಾಗಲಿದೆ. ಜೂನ್ 25ರಿಂದ ಮೊದಲನೇ ಸುತ್ತಿನ ಸೀಟು ಹಂಚಿಕೆ ಪ್ರಾರಂಭವಾಗುವ ಸಾಧ್ಯತೆ ಇದೆ.

ರಾಜ್ಯದ ಖಾಸಗಿ ಕಾಲೇಜುಗಳು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಗೆ ಸಲ್ಲಿಸಿದ ಸೀಟ್ ಮ್ಯಾಟ್ರಿಕ್ಸ್ ಗೆ ಅನುಗುಣವಾಗಿ ಮೂಲಸೌಕರ್ಯ, ಬೋಧಕ ಸಿಬ್ಬಂದಿ, ಪ್ರಯೋಗಾಲಯ ಸೇರಿ ಎಲ್ಲಾ ಸೌಲಭ್ಯಗಳಿವೆಯೇ ಎನ್ನುವ ಪರಿಶೀಲನೆ ನಡೆಸಲಾಗುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಸಿಇಟಿ ಎಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಕರಡು ಪ್ರಕಟಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಕರಡು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ನಂತರ ಒಂದು ವಾರದಲ್ಲಿ ಅಂತಿಮ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವೈದ್ಯಕೀಯ ವಿಭಾಗದಲ್ಲಿ ಇನ್ನೂ ನೀಟ್ ಫಲಿತಾಂಶ ಪ್ರಕಟವಾಗಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ 25ರಿಂದ ಸ್ನಾತಕ ಕೋರ್ಸ್ ಗಳ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಆರಂಭಿಸುವ ನಿರೀಕ್ಷೆ ಇದೆ. ಎರಡನೇ ಸುತ್ತಿನ ಕೌನ್ಸೆಲಿಂಗ್ ಜುಲೈ 10 ರಿಂದ ಮತ್ತು ಎರಡನೇ ಸುತ್ತಿನ ಮುಂದುವರೆದ ಕೌನ್ಸೆಲಿಂಗ್ ಜುಲೈ 25 ರಿಂದ ನಡೆಯಲಿದೆ. ಆಗಸ್ಟ್ 1ರಿಂದ ಸ್ನಾತಕ ಪದವಿ ತರಗತಿಗಳು ಆರಂಭವಾಗಲಿವೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular