ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 2ನೇ ವಾರದಿಂದ ಇಂಜಿನಿಯರಿಂಗ್ ಸೀಟು ಹಂಚಿಕೆ, ಶೀಘ್ರವೇ ಕೌನ್ಸೆಲಿಂಗ್

ಬೆಂಗಳೂರು: ಜುಲೈ 2ನೇ ವಾರದಿಂದ ಇಂಜಿನಿಯರ್ ಸೀಟುಗಳ ಹಂಚಿಕೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಭ್ಯವಿರುವ ಸೀಟುಗಳಿಗೆ ಜುಲೈ 2ನೇ ವಾರದಲ್ಲಿ ಕೌನ್ಸೆಲಿಂಗ್ ನಡೆಸಲು ನಿರ್ಧಾರ ಕೈಗೊಂಡಿದೆ.

ಎಲ್ಲಾ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಪ್ರಾಧಿಕಾರಕ್ಕೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವೈದ್ಯಕೀಯ ಸೀಟುಗಳನ್ನು ಹೊರತುಪಡಿಸಿ ಉಳಿದ ಸೀಟುಗಳನ್ನು ಹಂಚಿಕೆ ಮಾಡಲಾಗುವುದು. ನಂತರ ವೈದ್ಯಕೀಯ ಕೋರ್ಸ್ ಸೀಟುಗಳ ಹಂಚಿಕೆಗೆ ಪ್ರತ್ಯೇಕವಾಗಿ ಕೌನ್ಸೆಲಿಂಗ್ ನಡೆಸಲಾಗುವುದು.

ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, 2.75 ಲಕ್ಷ ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ಜೂನ್ 14ರಂದು ನೀಟ್ ಫಲಿತಾಂಶ ಪ್ರಕಟವಾಗಿದ್ದರೂ ಇನ್ನೂ ಕೌನ್ಸೆಲಿಂಗ್ ಆರಂಭವಾಗಿಲ್ಲ. ಕಳೆದ ವರ್ಷ ಒಟ್ಟಿಗೆ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಗಳಿಗೆ ಕೌನ್ಸೆಲಿಂಗ್ ನಡೆಸಲಾಗಿತ್ತು. ಜುಲೈ 2ನೇ ವಾರ ಇಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ಆರಂಭಿಸಲು ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read