HomeLatest Newsಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಭೌತಶಾಸ್ತ್ರಕ್ಕೆ ಒಂದು ಕೃಪಾಂಕ ಘೋಷಣೆ, ಕೆಲ ಉತ್ತರ ಬದಲಾವಣೆ

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಭೌತಶಾಸ್ತ್ರಕ್ಕೆ ಒಂದು ಕೃಪಾಂಕ ಘೋಷಣೆ, ಕೆಲ ಉತ್ತರ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ ಯುಜಿ ಸಿಇಟಿಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಒಂದು ಕೃಪಾಂಕ ನೀಡುವುದಾಗಿ ಘೋಷಿಸಿದೆ.

ಇದರೊಂದಿಗೆ ಕೆಲವು ಉತ್ತರಗಳಿಗೆ ಬದಲಾವಣೆ ಹಾಗೂ ಪರ್ಯಾಯ ಉತ್ತರಗಳನ್ನು ನೀಡಲಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ 15ರಿಂದ 17ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿದ್ದು, ಏಪ್ರಿಲ್ 18ರಂದು ಸರಿ ಉತ್ತರಗಳನ್ನು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಿ ಪರಿಷ್ಕೃತ ಸರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸರಿ ಉತ್ತರಗಳ ಪ್ರಕಾರ ಭೌತಶಾಸ್ತ್ರ ವಿಷಯದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದೆ. ಒಂದು ಉತ್ತರ ಬದಲಾವಣೆ ಮಾಡಲಾಗಿದೆ. ರಸಾಯನ ಶಾಸ್ತ್ರದಲ್ಲಿ ಎರಡು ಉತ್ತರಗಳಿಗೆ ಪರ್ಯಾಯ ಉತ್ತರಗಳನ್ನು ಸೂಚಿಸಲಾಗಿದೆ. ಜೀವಶಾಸ್ತ್ರ ಪತ್ರಿಕೆಯಲ್ಲಿ ಒಂದು ಪ್ರಶ್ನೆಗೆ ಪರ್ಯಾಯ ಉತ್ತರ ನೀಡಲಾಗಿದೆ. ಉಳಿದಂತೆ ಗಣಿತ ಪತ್ರಿಕೆ ಯಾವುದೇ ಉತ್ತರದಲ್ಲಿ ಬದಲಾವಣೆ ಮಾಡಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular