HomeLatest Newsಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಸೀಟು ಹಂಚಿಕೆ ರದ್ದು, ಡೆಪಾಸಿಟ್ ಪಾವತಿ, ಆಯ್ಕೆ ಬದಲಾವಣೆ...

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಸೀಟು ಹಂಚಿಕೆ ರದ್ದು, ಡೆಪಾಸಿಟ್ ಪಾವತಿ, ಆಯ್ಕೆ ಬದಲಾವಣೆ ಸಮಯ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ಸಿಇಟಿ/ ಯುಜಿ ನೀಟ್ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಕಾಷನ್ ಡೆಪಾಸಿಟ್ ಪಾವತಿ ಮತ್ತು ಆಯ್ಕೆ/ಇಚ್ಛೆಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು ಆಗಸ್ಟ್ 26ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ವಿಸ್ತರಿಸಿದೆ.

ಮೊದಲ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೂಡ ಆಗಸ್ಟ್ 26ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಎರಡನೇ ಸುತ್ತಿನ ಅಣಕು/ ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 29ರಂದು ಮಧ್ಯಾಹ್ನ 1ಗಂಟೆ ನಂತರ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶದ ದಿನಾಂಕವನ್ನು ನಂತರ ತಿಳಿಸಲಾಗುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular