HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರ ಮಕ್ಕಳಿಗೆ ಮುಖ್ಯ ಮಾಹಿತಿ : 'ಪ್ರತಿಭಾ ಪುರಸ್ಕಾರ'ಕ್ಕೆ...

BIG NEWS : ‘ರಾಜ್ಯ ಸರ್ಕಾರಿ’ ನೌಕರರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿದೆ.

2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.

ಲಿಂಕ್ : https://ksgeanews.blogspot.com
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YouTube ಚಾನಲ್ಗೆ ಭೇಟಿ ನೀಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
ವಿದ್ಯಾರ್ಥಿಯ ಪಾಸ್ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ
ಇಲಾಖೆಯ ಸೇವಾ ದೃಢೀಕರಣ ಪತ್ರ
ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ.
ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MBಮೀರದಂತೆ) ಅಪ್ ಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್ಗೆ ಸ್ವೀಕೃತಿ ರವಾನೆಯಾಗಲಿದೆ.
ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ: ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ 080-22354784/83 ಸಿ.ಎಸ್. ಷಡಾಕ್ಷರಿ ಇವರನ್ನು ಸಂಪರ್ಕಿಸಬಹುದಾಗಿದೆ.=

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular