HomeKarnatakaಡಿಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 15 ರಿಂದ ದಾಖಲೆಗಳ ಪರಿಶೀಲನೆ

ಡಿಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 15 ರಿಂದ ದಾಖಲೆಗಳ ಪರಿಶೀಲನೆ

ಬೆಂಗಳೂರು: ಡಿಸಿಇಟಿ -26 ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 15ರಿಂದ 17ರವರೆಗೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು.

 ಬಿ’ಯಿಂದ ‘ಒ’ವರೆಗಿನ ಕಂಡಿಕೆಗಳಡಿ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು, ಅರ್ಹತಾ ಕಂಡಿಕೆ ‘ಎ’ಯನ್ನು ಕ್ಲೇಮ್ ಮಾಡಿ ಡಿಪ್ಲೊಮಾ ಪರೀಕ್ಷೆಯನ್ನು ಹೊರ ರಾಜ್ಯಗಳ ಬೋರ್ಡುಗಳಿಂದ ತೇರ್ಗಡೆಯಾದವರು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಜಿಟಿಟಿಸಿ, ಸಿಪಿಐಟಿ, ಜವಳಿ ಕೈಗಾರಿಕಾ ಇಲಾಖೆಗಳ ಬೋರ್ಡ್ ಹೊರತುಪಡಿಸಿ ಇತರೆ ಯಾವುದೇ ಬೋರ್ಡ್ ನಿಂದ ಡಿಪ್ಲೊಮಾ ತೇರ್ಗಡೆಯಾದವರ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಅಭ್ಯರ್ಥಿಗಳು ಮೂರು ದಿನಗಳ ಪೈಕಿ ಯಾವುದಾದರೊಂದು ದಿನಕ್ಕೆ ಸ್ಲಾಟ್ ಬುಕ್ ಮಾಡಿಕೊಂಡು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3.30ರೊಳಗಿನ ಸಮಯದಲ್ಲಿ ಕಚೇರಿಗೆ ಹಾಜರಾಗಬೇಕು. ಅಭ್ಯರ್ಥಿಯ ಪರವಾಗಿ ಬೇರೆ ಯಾರೂ ಹಾಜರಾಗಲು ಅವಕಾಶವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಯಲ್ಲಿ ಕೋರಿರುವ ಕ್ಲೇಮುಗಳಿಗೆ ಪೂರಕವಾಗಿ ಎಲ್ಲ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ದೃಢೀಕರಣಗೊಂಡ ಒಂದು ಸೆಟ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು. ಅಂಕಪಟ್ಟಿ, ಪ್ರಮಾಣಪತ್ರ ಸೇರಿದಂತೆ ಯಾವುದೇ ದಾಖಲೆ ಹಾಜರುಪಡಿಸಲು ವಿಫಲವಾದವರ ದಾಖಲೆಗಳನ್ನು ಪರಿಶೀಲಿಸದೆ ನೋಂದಣಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗುವುದು. ನಂತರ ಇಂಥವರನ್ನು ಆಪ್ಷನ್ ನಮೂದು ಪ್ರಕ್ರಿಯೆಗೆ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular