HomeKarnatakaವಿಕಲಚೇತನರಿಗೆ ಮುಖ್ಯ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅರ್ಜಿ...

ವಿಕಲಚೇತನರಿಗೆ ಮುಖ್ಯ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ.

ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ 07 ಯೋಜನೆಗಳಿಗೆ  2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್, 15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ  ಮಡಿಕೇರಿ ತಾಲ್ಲೂಕಿನ ರಾಜೇಶ್ 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular