HomeKarnatakaವಿಕಲಚೇತರಿಗೆ ಮಹತ್ವದ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಕಲಚೇತರಿಗೆ ಮಹತ್ವದ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ(ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ.

ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಈ 08 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ (https://sevasindhu.karnataka.gov.in/Sevasindhu/DepartmentServicesKannada)  ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ರವರೆಗೆ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ವಿಕಲಚೇತನರು ಸೆಪ್ಟೆಂಬರ್, 30 ರೊಳಗೆ ಅರ್ಜಿ ಸಲ್ಲಿಸುವಂತೆ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular