ರೈತರಿಗೆ ಮುಖ್ಯ ಮಾಹಿತಿ : ‘PM ಫಸಲ್ ಬಿಮಾ’ ಯೋಜನೆಯಡಿ ನೋಂದಾಯಿಸಿಕೊಳ್ಳಲು ಸಲಹೆ

ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಿಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳ ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟಕ್ಕೆ ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆಯನ್ನು ಅಧಿಸೂಚಿಸಲಾಗಿದೆ.

ಪರಿಷ್ಕೃತ ಯೋಜನೆಯ ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುವುದು. ನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ನೋಂದಣಿ ಯೋಜನೆಯಿಂದ ಕೈಬಿಡಲಾಗುವುದು.

*ಬೆಳೆ:*

ಕೆಂಪು ಮೆಣಸಿನಕಾಯಿ (ನೀರಾವರಿ), ವಿಮಾ ಮೊತ್ತ ರೂ.43,505(ಪ್ರತಿ ಎಕರೆಗೆ), ರೈತರ ವಿಮಾ ಕಂತು(ಪ್ರತಿ ಎಕರೆಗೆ) ರೂ.2,175 ಪಾವತಿಸಬೇಕು. ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನ.

ಪ್ರಸುತ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸ್ಥಳ ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಗಾಗಿ ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳನ್ನು ಅಧಿಸೂಚಿಸಲಾಗಿದೆ. ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ ವಿಮಾ ಗರಿಷ್ಟ ಶೇ.25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ಎಲ್ಲಾ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ಅವರ ಬೆಳೆ ವಿಮೆ ರದ್ದುಪಡಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read