ತೊಗರಿ ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಕಲಬುರಗಿ : ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕಿನಲ್ಲಿ ೨೦೨೩ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲಾಗಿದ್ದು, ಜೇವರ್ಗಿ ಮತ್ತು ಯಡ್ರಾಮಿ ಎಲ್ಲಾ ರೈತರು ವಿಮೆ ಕಂತು ಪಾವತಿಸಿ ಇದರ ಸದುಪಯೋಗ ಪಡೆಯಬೇಕೆಂದು ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ಬೆಂಗಳೂರಿನ ಯುನಿವರಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ ಕಂಪನಿ ಲಿ. ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.
ಮುಂಗಾರು ಹಂಗಾಮಿಗೆ ತಾಲೂಕಿನ ಬೆಳೆಗಳ ವಿವರ ಹಾಗೂ ನೊಂದಣಿಗೆ ಕೊನೆಯ ದಿನಾಂಕದ ವಿವರ ಇಂತಿದೆ. ತೊಗರಿ (ಮಳೆ ಆಶ್ರಿತ), ತೊಗರಿ (ನೀರಾವರಿ), ಹತ್ತಿ (ಮಳೆ ಆಶ್ರಿತ), ಹತ್ತಿ (ನೀರಾವರಿ), ಮುಸುಕಿನ ಜೋಳ (ಮಳೆ ಆಶ್ರಿತ), ನೆಲಗಡಲೆ (ಶೆಂಗಾ) (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ), ಹೆಸರು (ಮಳೆ ಆಶ್ರಿತ), ಜೋಳ (ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ), ಉದ್ದು (ಮಳೆ ಆಶ್ರಿತ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ೨೦೨೩ರ ಜುಲೈ ೩೧ ಕೊನೆಯ ದಿನವಾಗಿದೆ. ಸೂರ್ಯಕಾಂತಿ (ಮಳೆ ಆಶ್ರಿತ), ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2022 ರ ಆಗಸ್ಟ್ 18 ಕೊನೆಯ ದಿನವಾಗಿದೆ. ಭತ್ತ (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ೨೦೨೩ರ ಆಗಸ್ಟ್ 16 ಕೊನೆಯ ದಿನವಾಗಿದೆ. ವಿಮಾ ಮೊತ್ತವು ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ.

ಪ್ರಸ್ತಕ ಸಾಲು ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ಧಿಷ್ಟ, ಪ್ರಕೃತಿ ವಿಕೋಪಗಳಾದ, ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ, ಮತ್ತು ಗುಡುಗು ಮಿಂಚುಗಳಿAದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರೈತರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೊಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 200 5142 ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಕಚೇರಿ ಸಂಪರ್ಕಿಸಲು ಅಥವಾ ಯುನಿವರಸಲ್ ಸೊಂಪೊ ಜೆನರಲ್ ಇನ್ಸುರೆನ್ಸ ಕಂಪನಿ ಲಿ. ಬೆಂಗಳೂರು ಸಂಸ್ಥೆ ತಾಲೂಕು ವಿಮಾ ಪ್ರತಿನಿಧಿ (ತಾಲೂಕು ಕೋ-ಆರ್ಡಿನೇಟರ್)ಗಳಾದ ಶಂಕರಗೌಡ ಪಾಟೀಲ ಇವರ ಮೊಬೈಲ್ ಸಂಖ್ಯೆ9845661193 ಸಂಪರ್ಕಿಸಲು ಕೋರಲಾಗಿದೆ. ಟೋಲ್ ಫ್ರೀ ಸಂಖ್ಯೆ (Toll Free Number) 1800-200-5142 ನ್ನು ಸಂಪರ್ಕಿಸಲು ಕೋರಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read