HomeKarnatakaರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಇನ್ಮುಂದೆ ಆನ್ ಲೈನ್ ನಲ್ಲೇ `ಬೆಳೆ ಪರಿಹಾರ’ ವಿತರಣೆ

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಇನ್ಮುಂದೆ ಆನ್ ಲೈನ್ ನಲ್ಲೇ `ಬೆಳೆ ಪರಿಹಾರ’ ವಿತರಣೆ

ಬೆಂಗಳೂರು :  ಆನ್‌ಲೈನ್‌ ಮೂಲಕವೇ ರೈತರಿಗೆ ಬೆಳೆ ಪರಿಹಾರ ತಲುಪಲಿದ್ದು, ಅದರ ಮಾಹಿತಿ ಬಿಟ್ಟು ಹೋದರೆ ಮ್ಯಾನ್ಯುವಲ್‌ ಆಗಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಶೇ.100ರಷ್ಟು ಎಲ್ಲಾ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಒಂದು ವಾರದಲ್ಲಿ ‘ಫ್ರುಟ್ಸ್‌’ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ರಾಜ್ಯ  ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಬೇಕು .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ  ಸರ್ಕಾರವು ರೈತರ ಹಿತದೃಷ್ಠಿಯಿಂದ NIC ಸಹಯೋಗದೊಂದಿಗೆ FRUITS (Farmer Registration and Unified Beneficiary Information System) ಎಂಬ ಸಾಫ್ಟ್‍ವೇರ್ ಅಪ್ಲಿಕೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ರೈತರು  ಕೃಷಿ ಅಥವಾ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು, ರೇಷ್ಮೆ, ಡೈರಿ, ಪೌಲ್ಟ್ರಿ, ಮೀನುಗಾರಿಕೆ ಮುಂತಾದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ, ಪ್ರತಿಯೊಂದು ಚಟುವಟಿಕೆಗೆ ವಿಭಿನ್ನ ಜ್ಞಾನ ಮತ್ತು ಅನುಭವದ ಅಗತ್ಯತೆ ಇರುತ್ತದೆ.

ಫ್ರೂಟ್ಸ್  ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ, ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಇನ್ನಿತರ ಯೋಜನೆಗಳಿಗೆ ಲಿಂಕ್ ಮಾಡಲಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಲು ಪಹಣಿ ಪತ್ರ ಮತ್ತು ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆ ಮಾಹಿತಿ ನೀಡಬೇಕು.

ಹೆಚ್ಚಿನ  ಮಾಹಿತಿಗಾಗಿ ಹತ್ತಿರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು

For Latest News Updates, Join Our Whatsapp Community🚩
RELATED ARTICLES

Most Popular