ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಪೇಜ್ ಇಂಡಸ್ಟ್ರೀಸ್ ಯುನಿಟ್-12, ಮತ್ತು ಯುನಿಟ್ ಫೋರ್ಸ್ ಟೆಕ್ನಾಲಾಜಿ ಪ್ರೈ. ಲಿ. ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಏ.9 ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಸ್ಎಸ್ಎಲ್ಸಿ, ಐ.ಟಿ.ಐ, ಪಿಯುಸಿ/ಡಿಪ್ಲೋಮಾ ಮತ್ತು ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08172-296374 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

