ಬೆಂಗಳೂರು: 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣದಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೇ 3, 5, 7 ಮತ್ತು 9 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟನ್ ಲ್ಲಿ ಪ್ರಕಟಿಸಲಾಗಿದೆ.
ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಮುಖ್ಯ ಪರೀಕ್ಷೆ ಬರೆಯಲು ಈ ಅಭ್ಯರ್ಥಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅವಕಾಶ ಕಲ್ಪಿಸಿದ್ದು, ಅವರು ಆಯೋಗದ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಏ. 28ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಮುಖ್ಯ ಪರಿಕ್ಷಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
