ಅಗಸ್ಟ್ 15 ರೊಳಗಾಗಿ ಎಲ್ಪಿಜಿ ಗ್ರಾಹಕರ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಧಾರವಾಡ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಧಾರವಾಡ ಜಿಲ್ಲೆಯ ಎಲ್ಲಾ ಎಲ್ಪಿಜಿ ಗ್ರಾಹಕರು ತಮ್ಮ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಅಗಸ್ಟ್ 15, 2026ರ ಒಳಗಾಗಿ ಪೂರ್ಣಗೊಳಿಸಬೇಕಾಗಿದೆ. ಗ್ರಾಹಕರ ಪರಿಶೀಲನೆಯನ್ನು ಬಲಪಡಿಸುವುದು ನಿಖರವಾದ ಫಲಾನುಭವಿಗಳ ದಾಖಲೆಗಳನ್ನು ಖಚಿತಪಡಿಸುವದು ಹಾಗೂ ಎಲ್ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವದು ಈ ಪ್ರಕ್ರಿಯೆಯ ಉದ್ದೇಶವಾಗಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಗ್ರಾಹಕರ ಎಲ್ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇರುತ್ತದೆ.
ಆದ್ದರಿಂದ ಈವರೆಗೂ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆ, ಇರುವಂತಹ ಎಲ್ಪಿಜಿ ಗ್ರಾಹಕರು ತಕ್ಷಣ ತಮಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ, ಅಗಸ್ಟ್ 15, 2026 ರೊಳಗಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಗ್ಯಾಸ್ ಏಜೆನ್ಸಿಯವರನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

