ಬೆಂಗಳೂರು: MBA, MCA, ME, M.Tech, M.Arch ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಆಕ್ಷೇಪಣೆಗಳು ಇದ್ದಲ್ಲಿ ಅ.25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು.
2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ
ಪ್ರಾಧಿಕಾರವು ಈಗಾಗಲೇ ತಿಳಿಸಿದಂತೆ ಎಂಬಿಎ / ಎಂಸಿಎ / ಎಂಇ / ಎಂಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ದಿನಾಂಕ 24-10-2025 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಿದೆ.
1. ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ 23-10-2025 ರ ಬೆಳಿಗ್ಗೆ 10.30 ರವರೆಗೆ ನಮೂದಿಸಿದ Options ಗಳನ್ನು ಪರಿಗಣಿಸಲಾಗಿದೆ.
2. ಇದು PGCET-2025 ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವಾಗಿದ್ದು, ಅಭ್ಯರ್ಥಿಗಳು ತಾತ್ಕಾಲಿಕವಾಗಿ ಹಂಚಿಕೆಯಾಗಿರುವ ಸೀಟಿಗೆ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ.
3. ಯಾವುದಾದರೂ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ (Options ಗಳನ್ನು ದಾಖಲಿಸಲಾಗಿದೆ, ಎರಡನೇ ಸುತ್ತಿನ ಕಟ್‌ಆಫ್ ಬ್ಯಾಂಕ್ ಪರಿಶೀಲಿಸಲಾಗಿದೆ. ಆದರೆ ಯಾವುದೂ ಸೀಟು ಹಂಚಿಕೆಯಾಗಿಲ್ಲ) ದಿನಾಂಕ 25-10-2025 ರ ಮಧ್ಯಾಹ್ನ 1.00 ರೊಳಗೆ keauthority-ka@nic.in ಗೆ ಎಲ್ಲಾ ವಿವರಗಳೊಂದಿಗೆ ಮೇಲ್ ಮಾಡಬಹುದು.
4. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಲಾಗುವುದು.
#MBA, #MCA, #ME, #M.Tech, #M.Arch ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 24, 2025
ಆಕ್ಷೇಪಣೆಗಳು ಇದ್ದಲ್ಲಿ ಅ.25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು.
– ಎಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ… pic.twitter.com/FdptidkxPk
