ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವವರಿಗೆ ಚಾಯ್ಸ್ ದಾಖಲಿಸಲು ಮತ್ತು ಶುಲ್ಕ ಪಾವತಿಸಲು ಆಗಸ್ಟ್ 19ರಂದು ಮಧ್ಯಾಹ್ನ 3 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ.
ಶುಲ್ಕ ಪಾವತಿ ನಂತರ ಸೀಟು ಖಾತರಿಯ ಚೀಟಿ ಡೌನ್ಲೋಡ್ ಮಾಡಿಕೊಂಡು ಮಂಗಳವಾರ ಸಂಜೆ 5:30ರ ಒಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು. ಇದುವರೆಗೆ ಯಾವುದೇ ಚಾಯ್ಸ್ ಆಯ್ಕೆ ಮಾಡದವರು ಹಾಗೂ ಶುಲ್ಕ ಪಾವತಿಸದಿರುವವರಿಗೆ ನೀಡಿರುವ ಕೊನೆಯ ಅವಕಾಶ ಇದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

