HomeLatest Newsಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಕ್ಕೆ ಮಾರ್ಗಸೂಚಿ ಸಹಿತ ಪರಿಷ್ಕೃತ ವೇಳಾಪಟ್ಟಿ...

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಕ್ಕೆ ಮಾರ್ಗಸೂಚಿ ಸಹಿತ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ಸಂಬಂಧ ಉಲ್ಲೇಖ(10) ರನ್ವಯ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಲಾಗಿರುತ್ತದೆ.

ಎಲ್.ಕೆ.ಜಿ ತರಗತಿಗೆ ಕನಿಷ್ಠ ವಯೋಮಿತಿ 04 ವರ್ಷ ಮತ್ತು ಗರಿಷ್ಠ ವಯೋಮಿತಿ 06 ವರ್ಷಗಳಾಗಿದ್ದು ಮತ್ತು 01ನೇ ತರಗತಿಗೆ ಕನಿಷ್ಟ 06 ವರ್ಷ ಮತ್ತು ಗರಿಷ್ಕೃ 08 ವರ್ಷವೆಂದು ಆದೇಶವಾಗಿರುವಂತೆ ಮಕ್ಕಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿರುತ್ತದೆ.

ಪ್ರಸ್ತುತ ಉಲ್ಲೇಖ(11)ರ ಸರ್ಕಾರದ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 01ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು 01 ಬಾರಿಯ ಕ್ರಮವಾಗಿ ಸಡಿಲಿಕೆ ನೀಡಿ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 01ನೇ ತಾರೀಖಿಗೆ 05 ವರ್ಷ 05 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ 01ನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿದೆ. ಆದ್ದರಿಂದ ಸರ್ಕಾರದ ಆದೇಶದಂತೆ 2025 ರ ಜೂನ್ 01ನೇ ತಾರೀಖಿಗೆ 05 ವರ್ಷ 05 ತಿಂಗಳು ಪೂರ್ಣಗೊಂಡಿರುವ ಮಕ್ಕಳಿಗೂ ಸಹ 2025-26ನೇ ಸಾಲಿಗೆ ಆರ್.ಟಿ.ಇ. ಅಡಿ ಒಂದನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅದರಂತೆ ಅರ್ಜಿ ಸಲ್ಲಿಸಲು 07 ದಿನಗಳ ಕಾಲಾವಕಾಶ ನೀಡಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸುತ್ತೋಲೆಯನ್ನು ಹೊರಡಿಸಿದೆ. ಮುಂದುವರೆದು 2025-26ನೇ ಸಾಲಿನ ಆ‌ರ್.ಟಿ.ಇ ಅಡಿ ಪ್ರವೇಶ ಪ್ರಕ್ರಿಯೆಗೆ 25.03.2025 ಸುತೋಲೆಯಲ್ಲಿನ ಮಾರ್ಗಸೂಚಿಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಸೂಚನೆ:

ಉಪನಿರ್ದೇಶಕರು(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆರ್.ಟಿ.ಇ. ನೋಡಲ್ ಅಧಿಕಾರಿಗಳು 2025-26ನೇ ಸಾಲಿನ ಆರ್.ಟಿ.ಇ ಅಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ದಿನಾಂಕ; 25/03/2025 ಮತ್ತು ಪರಿಷ್ಕೃತ ಸುತ್ತೋಲೆಯ ಮಾರ್ಗಸೂಚಿ ಅಂಶಗಳನ್ನು ಅನುಷ್ಠಾನಗೊಳಿಸುವುದು ಮತ್ತು ಪರಿಷ್ಕೃತ ವೇಳಾಪಟ್ಟಿಯಂತೆ ಸಲ್ಲಿಕೆಯಾಗುವ ಅರ್ಜಿಗಳನ್ನು ಆಯಾ ದಿನವೇ ಪರಿಶೀಲಿಸಿ ಇತ್ಯರ್ಥಪಡಿಸಲು ಕ್ರಮವಹಿಸುವುದು. ವ್ಯತ್ಯಯವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular