HomeKarnatakaಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳ ಹೃದಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ

ಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳ ಹೃದಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ

ಚಿತ್ರದುರ್ಗ: ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.

ಪ್ರತಿ ತಿಂಗಳ ಮೊದಲನೇ ಬುಧವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಮಕ್ಕಳ ಹೃದಯ ತಜ್ಞ ಡಾ.ಜಿ.ಎಸ್.ಅನಿಲ್ ಕುಮಾರ್ ತಪಾಸಣೆ ನಡೆಸುವರು. ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು, ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು, ಅನಿಯಮಿತ ಹೃದಯ ಬಡಿತ, ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಎಸ್.ಬಸವರಾಜಪ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular