HomeKarnataka5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯ ಲಸಿಕೆ ಹಾಕಿಸಲು ಜೂ. 28 ರಂದು...

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯ ಲಸಿಕೆ ಹಾಕಿಸಲು ಜೂ. 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ:

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular