ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮಗುವಿನ ಭವಿಷ್ಯದ ಹಿತದೃಷ್ಠಿಯಿಂದ ತಮ್ಮ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು.
ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಭೀತಿಯನ್ನುಂಟು ಮಾಡುತ್ತಿದ್ದು, ನಮ್ಮ ದೇಶದಲ್ಲೂ ಮರುಗಳಿಸುವ ಸಾಧ್ಯತೆ ಇದೆ. ಪ್ರತಿ ಬಾರಿಯೂ 2 ಹನಿ ಪೋಲಿಯೋ ಹಾಕಿಸಿ ನಿಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ. ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ನಮ್ಮ ಜೊತೆ ಕೈಜೋಡಿಸಿ.
ಹಾಗೆಯೇ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಯಾರೂ ಸುಳ್ಳು ವದಂತಿಗಳನ್ನು ಹರಡಬಾರದು. ಒಂದು ವೇಳೆ ಯಾರಾದರೂ ಸುಳ್ಳು ವದಂತಿಗಳನ್ನು ಹರಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.
