PG CET ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇದೇ ಮೊದಲ ಬಾರಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ

ಬೆಂಗಳೂರು: ಪಿಜಿ ಸಿಇಟಿ -2025ಕ್ಕೆ ಸಂಬಂಧಿಸಿದಂತೆ ಎಂಇ ಮತ್ತು ಎಂ ಟೆಕ್ ನ ಕಂಪ್ಯೂಟರ್ ಸೈನ್ಸ್ ಕೋರ್ಸ್ ಪ್ರವೇಶಕ್ಕೆ ಮಾತ್ರ ಇದೇ ಮೊದಲ ಬಾರಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತೀರ್ಮಾನಿಸಿದೆ.

ಜೂನ್ 2ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್ ಸೈನ್ಸ್ ಹೊರತುಪಡಿಸಿ ಎಂಇ ಮತ್ತು ಎಮ್ ಟೆಕ್ ನ ಇತರೆ ಕೋರ್ಸ್ ಗಳ ಪ್ರವೇಶಕ್ಕೆ ಮೇ 30 ರಂದು ನಿಗದಿಯಂತೆ ಲಿಖಿತ ಪರೀಕ್ಷೆ ನಡೆಯಲಿದೆ.

ಸಿಬಿಟಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಅಭ್ಯಾಸವಾಗಲಿ ಎನ್ನುವ ಕಾರಣಕ್ಕೆ ಮೇ 26 ಮತ್ತು 27 ರಂದು ಅಣಕು ಪರೀಕ್ಷೆ ನಡೆಸಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿದ ನಂತರ ಪರೀಕ್ಷಾ ಅಭ್ಯಾಸಕ್ಕೆ ಪ್ರಾಯೋಗಿಕ ಲಿಂಕ್ ನೀಡಲಾಗುವುದು. ಈ ಲಿಂಕ್ ಮೂಲಕ ಅಭ್ಯಾಸ ಮಾಡಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read