ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.5ರಿಂದ ಫೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
MCC ಅಖಿಲ ಭಾರತ ಕೋಟಾದ 3ನೇ ಸುತ್ತಿನ ಸೀಟು ಹಂಚಿಕೆಯ ವೇಳಾ ಪಟ್ಟಿ ಪರಿಷ್ಕರಿಸಿದ ಕಾರಣ ಫೆ.2ರ ಬದಲಿಗೆ ಫೆ.5ರಿಂದ ಇಚ್ಛೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ.
ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆ.9ರಂದು ಸಂಜೆ 5ಗಂಟೆಗೆ ಹಾಗೂ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆ.10ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ.
ಸೀಟು ಹಂಚಿಕೆಯಾದವರು ಫೆ.11ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.
ವಿವರಗಳಿಗೆ KEA ವೆಬ್ ಸೈಟ್ ನೋಡಲು ಕೋರಲಾಗಿದೆ.

