ವೈದ್ಯಕೀಯ ಸ್ನಾತಕೋತ್ತರ ಪದವಿಗೆ 3ನೇ ಸುತ್ತಿನಲ್ಲಿ ಪ್ರವೇಶ ಬಯಸುವ ಸೇವಾ ನಿರತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆ.12ರಿಂದ 14ರವರೆಗೆ ಅವಕಾಶ ನೀಡಲಾಗಿದೆ.
ಅರ್ಹತಾ ಅಂಕಗಳನ್ನು ಕಡಿಮೆ ಮಾಡಿರುವ ಕಾರಣಕ್ಕೆ ಹೊಸದಾಗಿ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅರ್ಹರು ಅರ್ಜಿ ಸಲ್ಲಿಸಬಹುದು. ಹಾಗೆ ಅರ್ಜಿ ಸಲ್ಲಿಸಿದವರು ಮೂಲ ದಾಖಲೆಗಳ ಪರಿಶೀಲನೆಗೆ ಫೆ.16ರಂದು ಬೆಳಿಗ್ಗೆ 1 ಗಂಟೆ ಒಳಗೆ ಕೆಇಎ ಕಚೇರಿಯಲ್ಲಿ ಹಾಜರಾಗಬೇಕು. ಬಳಿಕ ಅರ್ಹರಾದವರು ಫೆ.17ರಂದು ಬೆಳಿಗ್ಗೆ 11 ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

