ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಆಗಸ್ಟ್ 2ರಂದು ನಡೆಸುವ ಲಿಖಿತ ಪರೀಕ್ಷೆಯ ಸಮಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಬದಲಿಸಿದೆ.
ಆಗಸ್ಟ್ 2 ರಂದು ಮಧ್ಯಾಹ್ನ 2.30ರ ಬದಲಿಗೆ ಸಂಜೆ 4ಗಂಟೆಗೆ ಪರೀಕ್ಷೆ ಆರಂಭವಾಗಲಿದೆ.
ಕೆಲ ಅಭ್ಯರ್ಥಿಗಳು, ಮಧ್ಯಾಹ್ನದ ಪರೀಕ್ಷಾ ಕೇಂದ್ರಗಳು ಬೆಳಗಿನ ಪರೀಕ್ಷಾ ಕೇಂದ್ರದಿಂದ ದೂರ ಇದ್ದು ತೆರಳುವುದಕ್ಕೆ ಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸಮಯ ಬದಲಾವಣೆ ಮಾಡಿದ್ದು ಸಂಜೆ 4ರಿಂದ 5.30ರವರೆಗೆ ಪರೀಕ್ಷೆ ನಡೆಯಲಿದೆ.
ಉಳಿದಂತೆ ಬೆಳಗಿನ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

