ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

ಬೆಂಗಳೂರು : 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆ ನವೆಂಬರ್ 19 ರಂದು ನಡೆಯಲಿದ್ದು, ಪರೀಕ್ಷೆ ಸಂಬಂಧ ಅಭ್ಯರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ.

2022-23 ನೇ ಸಾಲಿನ ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನವೆಂಬರ್ 5 ರಂದು ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 19 ರಂದು ಮರುನಿಗದಿ ಮಾಡಲಾಗಿದೆ.
ನವೆಂಬರ್ 5 ರಂದು ಕೆಪಿಎಸ್ ಸಿ ಕೂಡ ವಿವಿಧ ಇಲಾಖೆಗಳ ನೇಮಕಾತಿ ನೇಮಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿತ್ತು. ಹೀಗಾಗಿ ಎರಡೂ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಕಾನ್ಸ್ ಟೇಬಲ್ ಪರೀಕ್ಷೆ ಮುಂದೂಡುವಂತೆ ಪೊಲೀಸ್ ಮುಖ್ಯಸ್ಥರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನವೆಂಬರ್ 19 ಕ್ಕೆ ಪರೀಕ್ಷೆ ಮುಂದೂಡಲಾಗಿದೆ.

100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಸ್ತುನಿಷ್ಠ ಮಾದರಿಯ ಬಹುವಿಧ ಆಯ್ಕೆ ಉತ್ತರಗಳ ಪರೀಕ್ಷೆ ಇದಾಗಿರುತ್ತದೆ. ಪ್ರತಿ ಸರಿ ಉತ್ತರಕ್ಕೆ 1.00 ಅಂಕಗವನ್ನು ನೀಡಲಾಗುತ್ತದೆ. ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read