ವೃತ್ತಿಪರ ಕೋರ್ಸ್ ಪ್ರವೇಶ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 28ರಂದು ಸಿಇಟಿ ಸೀಟು ಹಂಚಿಕೆ ಮಾಹಿತಿ ಕಾರ್ಯಾಗಾರ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ಸಿಇಟಿ ಅಭ್ಯರ್ಥಿಗಳು ಮತ್ತು ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಕುರಿತಾಗಿ ಸ್ಪಷ್ಟ ಮಾಹಿತಿ ನೀಡಲು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಜೂನ್ 28 ರಂದು ರಾಜ್ಯದ ಎಲ್ಲಾ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಯುಜಿಸಿಇಟಿ -2025: ಸೀಟು ಹಂಚಿಕೆ ಮಂಥನ ಕಾರ್ಯಾಗಾರ ಏರ್ಪಡಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, 8 ಅನುದಾನಿತ ಮತ್ತು 6 ವಿಟಿಯು ಸಂಯೋಜಿತ ಇಂಜಿನಿಯರಿಂಗ್ ಕಾಲೇಜುಗಳು, ಹಾಗೂ 9 ಜಿಲ್ಲೆಗಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯಾಗಾರ ನಡೆಯಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಎಲ್ಲಾ ರೀತಿಯ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read