ಬೆಂಗಳೂರು: ಸಿಇಟಿ ಫಲಿತಾಂಶ ಘೋಷಣೆಗೆ ಮೊದಲೇ ದಾಖಲೆಗಳ ಪರಿಶೀಲಿಸಿ ಫಲಿತಾಂಶದ ನಂತರ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಯೋಜಿಸಿದೆ.
ಅಭ್ಯರ್ಥಿಗಳು ತಮಗೆ ಅನುಕೂಲವಾಗುವ ದಿನಾಂಕದಂದು ಸಮಯ ನಿಗದಿಪಡಿಸಿಕೊಂಡು ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬಹುದು. ಒಂದು ದಿನಕ್ಕೆ ಒಂದು ಸಾವಿರ ಮಂದಿಯ ದಾಖಲೆ ಪರಿಶೀಲನೆಗೆ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಅರ್ಜಿಯಲ್ಲಿನ ದೋಷ ಸರಿಪಡಿಸಿಕೊಳ್ಳಲು ಮೇ 2 ರವರೆಗೆ ಕಾಲಾವಕಾಶ ನೀಡಲಾಗಿದೆ. ಇದುವರೆಗೆ 16,000ಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದು, ಇವೆರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ತೆರಳಿ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.